07 September 2010

ತೀರ್ಥಹಳ್ಳಿ ಎಂದರೆ...

ಮಲೆನಾಡಿನ ಒಳಗೆ ಹುದುಗಿರುವ ತೀರ್ಥಹಳ್ಳಿ ಸುಮಾರು ಹದಿನೈದು ಸಾವಿರ ಜನಸಂಖ್ಯೆಯೂ ಇರದ ಪುಟ್ಟ ಪಟ್ಟಣ. ಅತ್ತ ತೀರ ಹಳ್ಳಿಯೂ ಅಲ್ಲದೆ,ಇತ್ತ ಅರೆಬೆಂದ ಪಟ್ಟಣದ ಲಕ್ಷಣಗಳನ್ನ ರೂಢಿಸಿಕೊಳ್ಳುತ್ತಾ ತನ್ನ ಹೆಸರಿಗೆ ನ್ಯಾಯ ಸಲ್ಲಿಸುತ್ತಾ ಇದೆ.ನಾಲ್ಕೂ ಸುತ್ತಿನಲ್ಲಿರುವ ಗುಡ್ಡಗಳ ನಡುವೆ ತಟ್ಟೆಯಾಕಾರದಲ್ಲಿ ಊರು ಹಬ್ಬಿದ್ದು ಯಾವುದೆ ದಿಕ್ಕಿನಿಂದ ಊರು ಹೊಕ್ಕರೂ ನಿಮ್ಮ ಕಣ್ಣಿಗೆ ಅಡಿಕೆ ತೋಟಗಳು ಕಾಣುತ್ತವೆ.ಕಳೆದ ಅರ್ಧ ಶತಮಾನದಲ್ಲಿ ಆಗಿದ್ದ ಪ್ರಗತಿಯ ವೇಗವನ್ನ ಕಳೆದ ಐದೇ ವರ್ಷದಲ್ಲಿ ಸಾಧಿಸಿ ಅಡ್ಡಾದಿಡ್ಡಿ ಓಡುತ್ತಿರುವ ಕುಡುಕನಂತೆ ನನ್ನ ಕಣ್ಣಿಗೆ ಈ ನಡುವೆ ತೀರ್ಥಹಳ್ಳಿ ಕಾಣುತ್ತಿದೆ.


ಮೂಲತಃ ಕೆಳದಿ ಸಂಸ್ಥಾನದ ಆಡಳಿತಕ್ಕೆ ಒಳಪಟ್ಟಿದ್ದ ಇಲ್ಲಿಗೆ ನವ ನಾಗರೀಕತೆ ಕಾಲಿಟ್ಟದ್ದು ಬಹುಷಃ ಎಪ್ಪತ್ತು ವರ್ಷಗಳ ಹಿಂದೆ ಮೈಸೂರಿನ ಒಡೆಯರು ತುಂಗಾನದಿಗೆ ಅಡ್ಡಲಾಗಿ ಕಟ್ಟಿಸಿದ ಕಮಾನು ಸೇತುವೆಯ ಮೂಲಕ.ಬಿದನೂರು,ಕೆಳದಿ,ನಗರ ಹಾಗು ಇಕ್ಕೇರಿ ಗಳಲ್ಲಿ ನಾಲ್ನಾಲಕ್ಕು ರಾಜಧಾನಿ ಇದ್ದಿದ್ದರೂ ಕೆಳದಿ ನಾಯಕರ ವಾಣಿಜ್ಯದ ಕೇಂದ್ರವಾಗಿತ್ತು ಇದು.

ಅವರ ಗುರು ಮಠ ಇದ್ದುದು ಇಲ್ಲಿನ ಕವಲೆದುರ್ಗದಲ್ಲಿರುವ ಕೋಟೆಯಲ್ಲಿ.ಇಂದಿಗೂ ಈ ಲಿಂಗಾಯತ ಮಠ ಅಸ್ತಿತ್ವದಲ್ಲಿದೆ.ಸಾಂಸ್ಕ್ರತಿಕವಾಗಿ ಆ ಕಾಲದಿಂದಲೂ ತೀರ್ಥಹಳ್ಳಿ ಸಮೃದ್ಧ.ಸುತ್ತಮುತ್ತಲಿನ ಹೊಸನಗರ,ಕೊಪ್ಪ,ಶೃಂಗೇರಿ,ನರಸಿಂಹರಾಜಪುರ,ಕುಂದಾಪುರ,ಕಾರ್ಕಳ, ಶಿವಮೊಗ್ಗ ತಾಲೂಕುಗಳು ಹೋಲಿಕೆಯಲ್ಲಿ ಸಾಂಸ್ಕೃತಿಕವಾಗಿ ಇನ್ನೂ ತೂಕಡಿಸುತ್ತಿದ್ದರೆ ಇತ್ತ ತೀರ್ಥಹಳ್ಳಿಯಲ್ಲಿ ಅಕ್ಷರಶಃ ಪ್ರತಿಭಾ ಸ್ಪೋಟವಾಗುತ್ತಿದೆ.


ಕರ್ನಾಟಕ ಸಂಗೀತದ ಪಿತಾಮಹ ಪುರಂದರ ದಾಸರು ಇಲ್ಲಿನ ಆರಗದವರು.ಕನ್ನಡದ ಮೊದಲ ಜ್ಞಾನಪೀಠ ಪಡೆದ ಕುವೆಂಪು ಇಲ್ಲಿಯ ಕುಪ್ಪಳಿಯವರು.ಆರನೇ ಜ್ಞಾನಪೀಠವೂ ಇಲ್ಲಿನ ಭಾರತೀಪುರದ ಅನಂತಮೂರ್ತಿಯವರಿಗೆ ಸಂದಿದೆ.ಐದು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ ನಿರ್ದೇಶಕ ಗಿರೀಶ್ ಇಲ್ಲಿನ ಕಾಸರವಳ್ಳಿಯವರು.ಕರ್ನಾಟಕದಲ್ಲಿ ಗೇಣಿ ಪದ್ಧತಿ ಜಾರಿಗೆ ತಂದ ನಾಡಿನ ಎರಡನೇ ಮುಖ್ಯಮಂತ್ರಿ ಮಂಜಪ್ಪ ಇಲ್ಲಿನ ಕಡಿದಾಳಿನವರು (ಅಂದಹಾಗೆ ವಿಧಾನಸೌಧದ ಉದ್ಘಾಟಕರು ಇವರೇ). ಈ ನಾಡು ಕಂಡ ವಿಶಿಷ್ಟ ರಾಜಕಾರಣಿ ಗೋಪಾಲಗೌಡರು ಇಲ್ಲಿನ ಶಾಂತಾವೆರಿಯವರು.ಇಂದಿನ ಯುವಕರ ಒಂದು ತಲೆಮಾರಿನ ಕಣ್ತೆರೆಸಿದ ಪೂರ್ಣಚಂದ್ರತೇಜಸ್ವಿ ಹುಟ್ಟಿದ-ಪ್ರಕೃತಿಯಲ್ಲಿ ಕಡೆಗೆ ಲೀನವಾದ ಊರಿದು.ಕನ್ನಡದ ವಿಶಿಷ್ಟ ಕವಿ ಎಸ್ ವಿ ಪರಮೇಶ್ವರ ಭಟ್ಟರು ಇಲ್ಲಿನ ಮಾಳೂರಿನವರು.ಅಂಕಣ ಬರಹ ಪಿತಾಮಹ ಮಾನಪ್ಪ ನಾಯಕರು ಇಲ್ಲಿನ ಹಾರೋಗುಳಿಗೆಯವರು.ರಾಜ್ಯದಲ್ಲಿ ರೈತ ಚಳುವಳಿ ಕಟ್ಟಿ ಬೆಳೆಸಿದ ದಿವಂಗತ ಸುಂದರೇಶ್,ಶಾಮಣ್ಣ ಇಲ್ಲಿನ ಕಡಿದಾಳಿನವರು.ಶರತ್ ಕಲ್ಕೋದ್,ಸತ್ಯಮೂರ್ತಿ ಆನಂದೂರು,ರಮೇಶ್ ಶಟ್ಟಿ,ವಿಕಾಸ ನೇಗಿಲೋಣಿ,ಶ್ರೀಕಾಂತ್ ಭಟ್ ಇವರೆಲ್ಲ ಸಧ್ಯ ಪತ್ರಿಕೋದ್ಯಮದಲ್ಲಿ ಬ್ಯುಸಿ.ಇಲ್ಲಿನ ಎಂ ಕೆ ಇಂದಿರಾ,ಶಾರದ ಉಳುವೆಯವರನ್ನ ಓದಿರದ ಕಾದಂಬರಿ ಪ್ರಿಯರು ಇದ್ದಿರಲಿಕ್ಕಿಲ್ಲ.ಆಕಾಲದ ಸುಂದರಾಂಗ ಮಾನು,ಈ ಕಾಲದ ಚಲುವ ದಿಗಂತ ಇಲ್ಲಿಂದ ಹೋಗಿ ಬೆಳ್ಳಿತೆರೆಯಲ್ಲಿ ಮಿನುಗುತ್ತಿದ್ದರೆ.ಕೋಡ್ಲು ರಾಮಕೃಷ್ಣ ಇಲ್ಲಿನವರೇ ಆದ ಚಿತ್ರ ನಿರ್ದೇಶಕ

No comments: